ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಐತಿಹಾಸಿಕ ನಗರಿ ವಿಜಯಪುರದಲ್ಲಿ ಸೆ.28ರಿಂದ 15 ದಿನಗಳ ಕಾಲ ನಡೆಯಲಿರುವ ರಾಜ್ಯಮಟ್ಟದ ಖಾದಿ ಉತ್ಸವ-2022ಕ್ಕೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಸೆ.28ರಂದು ವಿದ್ಯುಕ್ತ್ ಚಾಲನೆ ನೀಡಿದರು.
ಖಾದಿ ಉತ್ಸವ-2022 ಹಿನ್ನೆಲೆಯಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ಜಿಲ್ಲಾ ರಂಗಮAದಿರದ ಆವರಣದಲ್ಲಿ ಹಬ್ಬದ ವಾತಾವರಣ ಕಂಡು ಬಂದಿತು. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ವಿಜಯಪುರಕ್ಕೆ ಆಗಮಿಸಿ ರಂಗಮAದಿರದ ಆವರಣದಲ್ಲಿ ಸಾಲಾಗಿ ಹಾಕಿದ್ದ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳಿಗೆ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಶಾಸಕರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಹರಿ ಗೋಳಸಂಗಿ, ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಸಿಇಓ ಜಿ.ವಿ.ನಾಗರಾಜು ಅವರೊಂದಿಗೆ ಖಾದಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟದ ಮತ್ತು ಇನ್ನೀತರ ಮಳಿಗೆಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. ರಾಜ್ಯಮಟ್ಟದ ಖಾದಿ ಉತ್ಸವದಲ್ಲಿ ಬಹುತೇಕ ಜಿಲ್ಲೆಗಳ ಖಾದಿ ಮಾರಾಟಗಾರಿಗೆ ಅವಕಾಶ ನೀಡಿದ್ದು, ಮಳಿಗೆಗಳನ್ನು ಅಚ್ಚುಕಟ್ಟಾಗಿ ನಿರ್ಮಿಸಿದ್ದಕ್ಕೆ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದರು.

ಬಳಿಕ ರಂಗಮAದಿರದಲ್ಲಿ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದ ವೇದಿಕೆಯ ಕಾರ್ಯಕ್ರಮಕ್ಕೆ ಶಾಸಕರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕರು, ಬೇರೆ ರೀತಿಯ ಬಟ್ಟೆಗೆ ಹೋಲಿಸಿದರೆ ಖಾದಿ ಬಟ್ಟೆಯು ಜನಸ್ನೇಹಿಯಾಗಿದೆ. ಚಳಿಗಾಲದ ವೇಳೆಯಲ್ಲಿ ಬಿಸಿ ಮತ್ತು ಬೇಸಿಗೆಯಲ್ಲಿ ತಂಪನ್ನು ನೀಡುವ ಗುಣ ಹೊಂದಿದ ಮತ್ತು ಅತೀ ಕಡಿಮೆ ಬೆಲೆಗೆ ಸಿಗುವ ಖಾದಿ ಬಟ್ಟೆಗಳು ಮತ್ತು ವಸ್ತುಗಳನ್ನು ಸಾರ್ವಜನಿಕರು ಖರೀದಿಸಬೇಕು ಎಂದು ಮನವಿ ಮಾಡಿದರು.
ಕರ್ನಾಟಕ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರಾದ ಕೆ.ವಿ.ನಾಗರಾಜು ಅವರು ಮಾತನಾಡಿ,
ವಿಜಯಪುರ ಜಿಲ್ಲೆಯಲ್ಲಿ ಕಳೆದ ವರ್ಷ ನಡೆದ ಖಾದಿ ಉತ್ಸವದಲ್ಲಿ 2.60 ಕೋಟಿ ವಾಹಿವಾಟು ಆಗಿದೆ. ಇದು ಈ ವರ್ಷ ದ್ವಿಗುಣವಾಗಬೇಕು. ಜನರು ಹೆಚ್ಚಿನ ಸಂಖ್ಯೆಯಲ್ಲಿ ರಂಗಮAದಿರ ಆವರಣಕ್ಕೆ ಆಗಮಿಸಿ ಖಾದಿ ಬಟ್ಟೆಗಳನ್ನು ಮತ್ತು ವಸ್ತುಗಳನ್ನು ಖರೀದಿಸಬೇಕು ಎಂದು ಜಿಲ್ಲೆಯ ಜನರಲ್ಲಿ ಮನವಿ ಮಾಡಿದರು.
ಈ ಮೊದಲು ಗ್ರಾಮೀಣ ಭಾಗದಲ್ಲಿ ಮಾತ್ರ ಖಾದಿ ಬಳಕೆಗೆ ಉತ್ತೇಜನವಿತ್ತು. ಈಗ ನಗರ ಪ್ರದೇಶದಲ್ಲು ಸಹ ಹೆಚ್ಚಿನ ಉತ್ತೇಜನ ನೀಡುತ್ತಿದ್ದೇವೆ. ಈ ಮೂಲಕ ನಿರುದ್ಯೋಗಿ ಯುವ ಸಮುದಾಯಕ್ಕೆ ಉದ್ಯೋಗ ಕೊಡಿಸುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಕರ್ನಾಟಕ ಗ್ರಾಮೋದ್ಯೋಗ ಸಂಘದ ಅಧ್ಯಕ್ಷರಾದ ಬಿ.ಬಿ.ಪಾಟೀಲ ಶೇಗುಣಸಿ ಅವರು ಮಾತನಾಡಿ, ಖಾದಿ ಉದ್ಯೋಗಕ್ಕೆ ಹಣಕಾಸಿನ ನೆರವು ನೀಡುವ ಕೆಲಸವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮಾಡುತ್ತಿವೆ ಎಂದು ತಿಳಿಸಿದರು. ಕಾಲೇಜು ಮತ್ತು ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳು ವಾರಕ್ಕೊಂದು ಬಾರಿ ಖಾದಿ ಬಟ್ಟೆ ಧರಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಅಧಿಕಾರಿ ಸಾವಿತ್ರಿ ದಳವಾಯಿ ಅವರು ಪ್ರಾಸ್ತಾವಿಕ ಮಾತನಾಡಿದರು.
ಸಮಾರಂಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಶಿವಪುತ್ರ ಹೊಸಮನಿ, ಜಿಲ್ಲಾ ಅಗ್ರಣೀಯ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರಾದ ನರೇಂದ್ರ ಬಾಬ, ಖಾದಿ ಮಂಡಳಿಯ ವಿವಿಧ ಜಿಲ್ಲೆಗಳ ನಿರ್ದೇಶಕರು, ಸಂಯೋಜಕರು ಮತ್ತು ಇತರರು ಉಪಸ್ಥಿತರಿದ್ದರು. ಎಚ್.ಎಂ.ಮಮದಾಪುರ ಅವರು ನಿರೂಪಿಸಿದರು.