ವಿಜಯಪುರ: ಜಿಲ್ಲೆಯ ನಾಲತವಾಡ ಪಟ್ಟಣದ ಗಂಗಾಧರ ನಗರದ ಆಶ್ರಯ ಕಾಲೋನಿಗೆ ಮೂಲಸೌಕರ್ಯ ಒದಗಿಸಬೇಕು ಎಂದು ನಿವಾಸಿಗಳು ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಆಶ್ರಯ ಕಾಲೋನಿಯಲ್ಲಿ ದಶಕಗಳಿಂದ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೇ ಮರೀಚಿಕೆ ಆಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಅಭಿವೃದ್ಧಿ ಮಾಡುತ್ತಿಲ್ಲ ಎಂದು ಆರೋಪಿಸಿದರು. ಅದಕ್ಕಾಗಿ
ಕೂಡಲೇ ಗಂಗಾಧರ ಕಾಲೋನಿಯಲ್ಲಿ ರಸ್ತೆ, ವಿದ್ಯುತ್ ದೀಪ, ಚರಂಡಿ ನಿರ್ಮಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.