ವಿಜಯಪುರ: 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ತಾಲೂಕಾ ಮಟ್ಟದ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ ಎಂದು ಎಲ್ಇಎಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಿದ್ದು ಕಪ್ಪೇನವರ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ 10:30ಕ್ಕೆ ನಗರದ ಕೆಸಿಪಿ ಸೈನ್ಸ್ ಕಾಲೇಜು ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಎಲ್ಇಎಸ್ ಶಿಕ್ಷಣ ಸಂಸ್ಥೆಯ ಚೇರ್ಮನ್ ಸೋಮನಾಥ ಭೋಗಶೆಟ್ಟಿ, ನಾಗಠಾಣ ಶಾಸಕ ವಿಠ್ಠಲ ಕಟ್ಕದೊಂಡ ಸೇರಿದಂತೆ ಗಣ್ಯರು ಭಾಗವಹಿಸುತ್ತಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದರು.