ವಿಜಯಪುರ: ಟಂಟಂ ಹಾಗೂ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಟಂಟಂ ಚಾಲಕ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆದಿದೆ.
32 ವರ್ಷದ ಮುದಕಪ್ಪ ತಳವಾರ ಮೃತಪಟ್ಟಿರುವ ಟಂಟಂ ಚಾಲಕನ. ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗವೇ ಕಾರಣ ಆಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವರಹಿಪ್ಪರಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.