ವಿಜಯಪುರ: ಟೆನಿಸ್ ಬಾಲ್ ಕ್ರಿಕೆಟ್ ಚಾಂಪಿಯನ್ಶಿಪ್ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ ಎಂದು ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಡಾ. ಬಾಬು ರಾಜೇಂದ್ರ ನಾಯಕ್ ಹೇಳಿದರು.
ವಿಜಯಪುರದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 25ರಂದು ನಗರದ ಜಿಲ್ಲಾ ಪಂಚಾಯತ ಆವರಣದಲ್ಲಿ ಡಾ. ಅಬ್ದುಲ್ ಹಕೀಂ ಮೆಮೋರಿಯಲ್ ನ್ಯಾಶನಲ್ ಟೆನಿಸ್ ಬಾಲ್ ಕ್ರಿಕೆಟ್ ಚಾಂಪಿಯನ್ಶಿಪ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ.
ಇನ್ನೂ ಪಂದ್ಯಾವಳಿಯನ್ನು ಶಾಸಕ ಎಂಬಿ ಪಾಟೀಲ್ ಉದ್ಘಾಟಿಸುವರು. ಅಲ್ಲದೇ, ಕಾರ್ಯಕ್ರಮದಲ್ಲಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಶಿವಾನಂದ ಪಾಟೀಲ, ಡಿಸಿ ವಿಜಯಮಹಾಂತೇಶ ದಾನಮ್ಮನವರ ಸೇರಿದಂತೆ ಗಣ್ಯರು ಭಾಗವಹಿಸುತ್ತಾರೆ ಎಂದರು.