ವಿಜಯಪುರ: ಯುವಕನಿಗೆ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಸಿದೆ. ವಿನೋದ ಪವಾರ್ ಗಂಭೀರವಾಗಿ ಗಾಯಗೊಂಡಿದ್ದಾನೆ. ನಡೆದುಕೊಂಡು ಹೋಗುವಾಗ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಇದರಿಂದ ವಿನೋದ ಗಾಯಗೊಂಡಿದ್ದಾನೆ. ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.