ವಿಜಯಪುರ: ಲಾರಿ ಹಾಗೂ ಸರ್ಕಾರಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಗೆಣ್ಣೂರ ಕ್ರಾಸ್ ಬಳಿ ಶನಿವಾರ ನಡೆದಿದೆ.
ಇನ್ನು ಅಪಘಾತದಲ್ಲಿ ಲಾರಿ ಚಾಲಕ, ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ, ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲ್ಹಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.