ವಿಜಯಪುರ: ಬೈಕ್ ಹಾಗೂ ಲಾರಿ ಮಧ್ಯ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಇಂಡಸ್ಟ್ರಿಯಲ್ ಏರಿಯಾ ರಸ್ತೆಯಲ್ಲಿ ನಡೆದಿದೆ. ಇನ್ನೂ ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರು ಯುವಕರ ಹೆಸರು ಲಭ್ಯವಾಗಿಲ್ಲ. ಆದ್ರೇ, ಅಪಘಾತಕ್ಕೆ ಬೈಕ್, ಲಾರಿ ಅತಿವೇಗವೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಲಾರಿ, ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.