ವಿಜಯಪುರ: ಪಾದಚಾರಿಗೆ ಸರ್ಕಾರಿ ಬಸ್ ಡಿಕ್ಕಿಯಾಗಿರುವ ಪರಿಣಾಮ ಪಾದಚಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ನಡೆದಿದೆ.
ಇನ್ನೂ ಪಾದಚಾರಿಯ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ಆದ್ರೇ, ಬಸ್ ಡಿಕ್ಕಿ ಬಳಿಕ KA 28 F 2249 ನಂಬರಿನ ಚಾಲಕ, ನಿರ್ವಾಹಕ ಬಸ್ ಬಿಟ್ಟು ಪರಾರಿಯಾಗಿದ್ದಾರೆ. ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.