ರಾಯಚೂರು: ರಸ್ತೆ ಪಕ್ಕದಲ್ಲಿ ನಿಂತಿದ್ದ ಬೈಕ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿರುವ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ 4 ಮೈಲಿ ಕ್ಯಾಂಪ್ ಬಳಿ ನಡೆದಿದೆ.
ಹನುಮಂತ ಎಂಬುವರ ಬೈಕ್ಗೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಮೂರು ಮಕ್ಕಳು, ವ್ಯಕ್ತಿ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ.
ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲು ಆಗಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.