ವಿಜಯಪುರ: ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಹೋರಾಟ ನಡೆಸಿದ್ದ ಅಲ್ಪಸಂಖ್ಯಾತ ಮುಖಂಡ ಯಾಸೀನ್ ಜವಳಿ ಇದೀಗ್ ಮತ್ತೊಂದು ಅಖಾಡಕ್ಕೆ ಎಂಟ್ರಿ ಆಗಿದ್ದಾರೆ. ಉತ್ತರ ಕರ್ನಾಟಕ ಅಭಿವೃದ್ಧಿ ಹಾಗೂ ಆಲಮಟ್ಟಿಗೆ ಸರ್ಕಾರಿ ಕಚೇರಿ ಸ್ಥಳಾಂತರಕ್ಕೆ ಹೋರಾಟ ಮಾಡಿರುವ ಯಾಸೀನ್ ಜವಳಿ ಇದೀಗ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ಜವಳಿ ಎಂಟ್ರಿ ನೀಡುತ್ತಿದ್ದಾರೆ.
ಬಬಲೇಶ್ವರ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಆಗಬೇಕಿದೆ. ಅದಕ್ಕಾಗಿ ನಾನು ಬಬಲೇಶ್ವರ ಮತಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಜವಳಿ ಹೇಳಿದ್ದಾರೆ. ಅದಕ್ಕಾಗಿ ಈ ಸಲ ಬಿಜೆಪಿ, ಕಾಂಗ್ರೆಸ್ಗೆ ಟಕ್ಕರ್ ನೀಡಲು ಸಜ್ಜಾಗಿದ್ದೇನೆ. ಜನರ ಆಶೀರ್ವಾದ ನನ್ಮೇಲೆ ಇದೆ ಎಂದರು.