ವಿಜಯಪುರ: ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ದದಾಮಟ್ಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಜಗದೀಶ್ ತರ್ಲಘಟ್ಟಿ ಆತ್ಮಹತ್ಯೆಗೆ ಶರಣಾದವರು. ಇನ್ನು ಜಗದೀಶ್ ಹಲವು ದಿನಗಳಿಂದ ಮದ್ಯ ವ್ಯಸನಿಯಾಗಿದ್ದನು ಎಂದು ಮಾಹಿತಿ ಲಭ್ಯವಾಗಿದೆ. ಅಲ್ಲದೇ, ದಿನಂಪ್ರತಿ ಮದ್ಯದ ವ್ಯಸನಿಯಾಗಿದ್ದನು. ಅದಕ್ಕಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಬಲೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.