ವಿಜಯಪುರ: ಅಪರಿಚಿತ ವ್ಯಕ್ತಿಯ ಶವವೊಂದು ಬಡಿ ಬಾವಡಿಯಲ್ಲಿ ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಗಗನ್ ಮಹಲ್ ಆವರಣದಲ್ಲಿ ಸೋಮವಾರ ನಡೆದಿದೆ. ಅಪರಿಚಿತ ವ್ಯಕ್ತಿಯ ಶವ ಬಡಿ ಬಾವಡಿಯಲ್ಲಿ ಕಂಡು ಬಂದಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ. ಅಲ್ಲದೇ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.