ವಿಜಯಪುರ: ಬೈಕ್ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಝಳಕಿ ಕ್ರಾಸ್ ಬಳಿ ನಡೆದಿದೆ.
ಗುರುರಾಜ್ ಶಿರಶ್ಯಾಡ ಮೃತಪಟ್ಟಿರುವ ಬೈಕ್ ಸವಾರ. ಇನ್ನು ಬೈಕ್ನಲ್ಲಿ ಹೋಗುವಾಗ ಬೈಕ್ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಪರಾರಿಯಾಗಿದೆ. ಡಿಕ್ಕಿ ವಿಡಿಯೋ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.