ವಿಜಯಪುರ: ಅನುಮಾನಾಸ್ಪದ ರೀತಿಯಲ್ಲಿ ಬೈಕ್ ಸವಾರನ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೂಡಗಿ ತಾಂಡೆ ರಸ್ತೆಯಲ್ಲಿ ನಡೆದಿದೆ.
ಕೊಲ್ಹಾರ ಗ್ರಾಮದ ಯುವಕ ವಿಠ್ಠಲ ಪರಪ್ಪ ಕುಂಬಾರ ಎಂದು ಗುರ್ತಿಸಲಾಗಿದೆ. ರಾತ್ರಿ ಮನೆಯಲ್ಲಿ ತನ್ನ ತಾಯಿಯಿಂದ ಮೊಬೈಲ್ ತೆಗೆದುಕೊಂಡು ಹೋಗಿದ ವಿಠಲ್ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೂಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.