ವಿಜಯಪುರ: ಕಾರ್ ಅಪಘಾತ ಸ್ಥಳದಲ್ಲೆ ಮೂವರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ವಿಜಯಪುರದ ಹೆಗಡಿಹಾಳ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಕಾರು ಡ್ರೈವರ್‌ನ ನಿಯಂತ್ರಣ ತಪ್ಪಿ ಮರಕ್ಕೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರ ದಾರುಣ ಸಾವು ಆಗಿದೆ. ಸಾವನ್ನಪ್ಪಿದ ಮೂವರು ಉತ್ನಾಳ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.