ವಿಜಯಪುರ: ಕಾರ್ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿರುವ ಪರಿಣಾಮ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸಂಗೀತಾ ಡಾಬಾದ ಬಳಿ ನಡೆದಿದೆ.
ವಿನೋದ ಸುಣಗಾರ ಮೃತಪಟ್ಟಿರುವ ದುರ್ದೈವಿ. ಇನ್ನು ವಿಜಯಪುರದಿಂದ ಸಿಂದಗಿಗೆ ಹೋಗಿದ್ದ ವೇಳೆಯಲ್ಲಿ ಅತೀ ವೇಗದಿಂದ ಹೋಗುವಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.