ವಿಜಯಪುರ: ನಮ್ಮ ಪಕ್ಷದಲ್ಲಿ ಕಾರ್ಯಕರ್ತರೆ ನಮಗೆ ಜೀವಾಳ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬರುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಹಾಗೂ ಬಿಜೆಪಿ ಪಕ್ಷದ ಮೇಲೆ ಗೆಲವು ಆಗುತ್ತದೆ. ಮುಂದಿನ ಚುನಾವಣೆಯಲ್ಲಿ ಮತ್ತೇ ಬಹುಮತ ಪಡೆದುಕೊಂಡು ಅಧಿಕಾರಕ್ಕೆ ಬರುತ್ತೇವೆ ಎಂದರು. ಅಲ್ಲದೇ, 40% ಸರ್ಕಾರ ಎನ್ನುವುದು ಸುಳ್ಳು. ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣಿ ಮಾಡುವುದು ಸಹಜ. ಅದಕ್ಕಾಗಿ ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಕಿಡಿಕಾರಿದರು. ಇನ್ನೂ ವಿಧಾನಸೌಧದಲ್ಲಿ ಲಕ್ಷಾಂತರ ನಗದು ಸಿಕ್ಕಿದನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ಪ್ರಕರಣ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.