ವಿಜಯಪುರ: ಚಲಿಸುತ್ತಿದ್ದ ಕಾರ್ ಟೈಯರ್ ಬ್ಲಾಸ್ಟ್ ಆಗಿರುವ ಪರಿಣಾಮ ಕಾರ್ ಪಲ್ಟಿಯಾಗಿರುವ ಘಟನೆ ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿ ನಡೆದಿದೆ.
ಇನ್ನು ಕಾರಿನಲ್ಲಿದ್ದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಕಾರ್ ಪಲ್ಟಿಯಾಗಿರುವ ಪರಿಣಾಮ ಕಾರ್ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.