ವಿಜಯಪುರ: ಲಾರಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಮಧ್ಯದಲ್ಲಿ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಇನ್ನು ಲಾರಿ ಪಲ್ಟಿಯಾಗಿರುವ ಪರಿಣಾಮ ಚಾಲಕನಿಗೆ ಸಣ್ಣಪುಟ್ಟ ಗಾಯಾಳು ಆಗಿವೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಲಾರಿ ಸಂಪೂರ್ಣವಾಗಿ ಜಖಂಗೊಂಡಿದೆ. ಚಾಲಕನ ಹೆಸರು ತಿಳಿದುಬಂದಿಲ್ಲ. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.