ವಿಜಯಪುರ: ಚಲಿಸುವ ಗೂಡ್ಸ್ ವಾಹನದ ಟೈಯರ್ ಬ್ಲಾಸ್ಟ್ ಆಗಿರುವ ಪರಿಣಾಮ ವಾಹನ ಪಲ್ಟಿಯಾಗಿರುವ ಘಟನೆ ವಿಜಯಪುರ ತಾಲ್ಲೂಕಿನ ಹಿಟ್ನಳ್ಳಿ ಮನಗೂಳಿ ರಸ್ತೆಯಲ್ಲಿ ನಡೆದಿದೆ.
ಇನ್ನೂ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಅಲ್ಲದೇ, ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಸಾಮಗ್ರಿಗಳು ಹಾಳಾಗಿದೆ. ಅಲ್ಲದೇ, ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.