ವಿಜಯಪುರ: ಮಾರಕಾಸ್ತ್ರದಿಂದ ಇರಿದು
ಯುವಕನ ಬರ್ಬರ ಹತ್ಯೆಗೈದಿರುವ ಘಟನೆ ವಿಜಯಪುರ ನಗರದ ಗ್ಯಾಂಗ್ ಬಾವಡಿ ಪ್ರದೇಶದಲ್ಲಿ ನಡೆದಿದೆ. ಫೈಸಲ್ ಇನಾಂದಾರ್ (24) ಕೊಲೆಯಾದ ಯುವಕ. ಅಪರಿಚಿತ ದುಷ್ಕರ್ಮಿಗಳಿಂದ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಭೇಟಿ ಪರಿಶೀಲನೆ ನಡೆಸಿದರು. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ವಿಜಯಪುರದಲ್ಲಿ ಯುವಕನ ನಿಗೂಢ ಹತ್ಯೆ…?
