ವಿಜಯಪುರ: ಭೀಮೆಯಲ್ಲಿ ಕುಡಿಯುವ ನೀರಿನ ಹಾಹಾಕಾರ ಆರಂಭವಾಗಿದೆ. ಇನ್ನು ರಾಜ್ಯಾದ್ಯಂತ ಮಳೆ ಆಗುತ್ತಿದ್ದು, ಇದರ ಮಧ್ಯೆ ಕುಡಿಯುವ ನೀರಿನ ಸಮಸ್ಯೆ..
ಹೌದು..! ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣ ಆಗುತ್ತಿದೆ. ಕಳೆದ 2 ತಿಂಗಳಿನಿಂದ ಗ್ರಾಮದ ಜನರು ನೀರಿಗಾಗಿ ಪರದಾಡುವಂತೆ ಆಗಿದೆ. ಅಡವಿ ವಸತಿಗಳಿಗೆ ಎರಡು ಟ್ಯಾಂಕರ್ ನೀರಿನ ವ್ಶವಸ್ಥೆ ಮಾಡಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಎರಡು ಟ್ಶಾಂಕರ್ ನೀರಿನ ವ್ಶವಸ್ಥೆ ಜನರಿಗೆ ಸಾಕಾಗುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದಕ್ಕಾಗಿˌ ಬಹುಹಳ್ಳಿ ಕುಡಿಯುವ ನೀರಿನ ವ್ಶವಸ್ಥೆಯನ್ನು ತುರ್ಥಾಗಿ ಪ್ರಾರಂಭಿಸಬೇಕು.
ಜನರ ಬೇಡಿಕೆಗಳು ಈಡೇರದಿದ್ದರೆ ಸಾಮಾಜಿಕ ಕಾರ್ಯಕರ್ತ ಪ್ರೀತು ದಶವಂತ ಮುಂದಾಳತ್ವದಲ್ಲಿ ಗ್ರಾಮಸ್ಥರೆಲ್ಲರು ಸೇರಿ ಇಂಡಿ ಮಿನಿ ವಿಧಾನಸೌದದ ಎದುರುಗಡೆ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.