ವಿಜಯಪುರ: ಯುವಕ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಡೆದಿದೆ.
28 ವರ್ಷದ ಪ್ರಭುದೇವ ನಂದಿಕೊಲಮಠ ಆತ್ಮಹತ್ಯೆಗೆ ಶರಣಾದ ಯುವಕ. ಇನ್ನು ಪ್ರಭುದೇವ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸವನಬಾಗೇಬಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.