ವಿಜಯಪುರ: ಶಿಕ್ಷಕನೋರ್ವ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶಿಲ್ದಾರ ಕಚೇರಿಯ ಆವರಣದಲ್ಲಿ ನಡೆದಿದೆ. ಸಿಂದಗಿ ತಾಲೂಕಿನ ಸಾಸಾಬಳ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ್ ನೇಣಿಗೆ ಶರಣಾಗಿರುವ ಶಿಕ್ಷಕ. ಅಲ್ಲದೇ, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಿಂದಗಿ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.