ವಿಜಯಪುರ: ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ತಾಲ್ಲೂಕಿನ ತಿಡಗುಂದಿ ಬಳಿ ರವಿವಾರ ನಡೆದಿದೆ. ಇನ್ನೂ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ ಆಗಿದ್ದು, ಬಸ್ ಚಾಲಕನಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಅಲ್ಲದೇ, ಚಡಚಣ ಟೂ ಇಳಕಲ್ಗೆ ಹೋಗುವ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.