ವಿಜಯಪುರ: ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ ಆಗಿರುವ ಘಟನೆ ವಿಜಯಪುರದ ಗೋಳಗುಮ್ಮಟ್ ಎದುರು ನಡೆದಿದೆ.
ಇನ್ನು ಕಾರಿನಲ್ಲಿದ್ದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಲ್ಲದೇ, ಅಪಘಾತದಲ್ಲಿ ಕಾರ್ ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.