ವಿಜಯಪುರ: ಬೈಕ್ ಹಾಗೂ ಟಂಟಂ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಮಹಿಳೆ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ಪಟ್ಟಣದ ಗೊಳಸಂಗಿ ಬಳಿ ರವಿವಾರ ನಡೆದಿದೆ. ಅಪಘಾತದಲ್ಲಿ ಮೃತಪಟ್ಟಿರುವ ಮಹಿಳೆಯ ಹೆಸರು ಲಭ್ಯವಾಗಿಲ್ಲ. ಅಲ್ಲದೇ, ಅಪಘಾತದಲ್ಲಿ ನಾಲ್ವರು ಮಹಿಳೆಯರು, ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/06/IMG_20230611_153110-1024x584.jpg)