ವಿಜಯಪುರ: ಪಾದಚಾರಿ ಮಹಿಳೆಗೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಡಿಕ್ಕಿಯಾಗಿರುವ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬ್ಯಾಕೋಡ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ನಿಂಗಮ್ಮ ಅಪ್ಪಾಸಾಹೇಬ್ ಭಜಂತ್ರಿ ಮೃತಪಟ್ಟಿರುವ ದುರ್ದೈವಿ. ಇನ್ನೂ ಟ್ರ್ಯಾಕ್ಟರ್ ಚಾಲಕನ ಅತಿ ವೇಗವೆ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.