ವಿಜಯಪುರ: ಮಹಿಳೆ ಬಸ್ ಏರುವಾಗ ಬ್ಯಾಗ್ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಶ್ರೀದೇವಿ ಮುರುಗೇಶ ರೋಡಗಿ ಎಂಬುವರ ಚಿನ್ನಾಭರಣಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ. ಇನ್ನು ಬ್ಯಾಗ್ನಲ್ಲಿದ್ದ 2.10 ಲಕ್ಷ ಮೌಲ್ಯದ 70 ಗ್ರಾಂ ಚಿನ್ನ ಕಳ್ಳತನ ಆಗಿದೆ. ಈ ಕುರಿತು ಠಾಣೆಯಲ್ಲಿ 12/07/22 ರಂದು ದೂರು ನೀಡಿದ್ದಾರೆ. ಈ ಕುರಿತು ಗಾಂಧಿಚೌಕ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.