ವಿಜಯಪುರ: ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಯುಕೆಪಿ ಬಳಿ ರವಿವಾರ ತಡರಾತ್ರಿ ನಡೆದಿದೆ. ಸೈಯದ್ಸಾಬ್ ಅಹಮದಿ, ರವಿ ಬಾಡಗಂಡಿ, ಸಂಗಪ್ಪ ಹಂಚಿನಾಳ ಬಂಧಿತ ಆರೋಪಿಗಳು. ಬಂಧಿತರಿಂದ 6 ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಪಿಎಸ್ಐ ಪ್ರೀತಮ್ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಕೊಲ್ಹಾರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.