ವಿಜಯಪುರ: ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ವಿಜಯಪುರದ ಅನ್ನಪೂರ್ಣ ಬೋಸಲೆಗೆ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಹಾಗೂ ಅವರ ವಾಯು ವಿಹಾರಿಗಳ ವತಿಯಿಂದ ಸನ್ಮಾನಿ, ಗೌರವಿಸಿದರು.
ವಿಜಯಪುರ ನಗರದ ಅಂಬೇಡ್ಕರ್ ಮೈದಾನದಲ್ಲಿ ಬೋಸಲೆಗೆ ಸನ್ಮಾನಿಸಲಾಯಿತು. ಇದೇ ವೇಳೆಯಲ್ಲಿ ಪಟ್ಟಣಶೆಟ್ಟಿ ಮಾತನಾಡಿ, ಕ್ರೀಡಾಂಗಣದಲ್ಲಿ ಸಾಕಷ್ಟು ಕ್ರೀಡಾ ವಿದ್ಯಾರ್ಥಿಗಳನ್ನು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಯಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣ ಮಾಡುತ್ತಿದ್ದಾರೆ.
ಇದು ನಮ್ಮ ನಗರದ ಹೆಮ್ಮೆಯ ವಿಷಯ ಆಗಿದೆ. ಅನ್ನಪೂರ್ಣ ಬೋಸಲೆ ಅವರು ರಾಜ್ಯ ಕ್ರಿಕೆಟ್ ಮಹಿಳಾ ತಂಡಕ್ಕೆ ಆಯ್ಕೆಯಾಗಿದ್ದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ಮುಂಬರುವ ದಿನಗಳಲ್ಲಿ ಈ ಯುವತಿ ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಲಿ ಎಂದರು.