ವಿಜಯಪುರ: ಎಮ್ಮೆಗಳಿಗೆ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಎರಡು ಎಮ್ಮೆಗಳು ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿ ನಡೆದಿದೆ.
ಅಭಿಷೇಕ ಹಲಗಲಿ ಎಂಬುವರಿಗೆ ಸೇರಿದ 1.5 ಲಕ್ಷ ಮೌಲ್ಯದ ಎರಡು ಎಮ್ಮೆಗಳು ಸಾವನ್ನಪ್ಪಿವೆ. ಇನ್ನು ಸೊಲ್ಲಾಪುರ ರಸ್ತೆಯಲ್ಲಿ ರಸ್ತೆ ದಾಟುವ ಸಂದರ್ಭದಲ್ಲಿ ಅಪರಿಚಿತ ವಾಹನ ಎಮ್ಮೆಗಳಿಗೆ ಡಿಕ್ಕಿ ಹೊಡೆದು ಸವಾರ ಪರಾರಿಯಾಗಿದ್ದಾನೆ. ವಿಜಯಪುರ ಆದರ್ಶನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.