ವಿಜಯಪುರ: ರಾಜ್ಯ ಮಟ್ಟದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ ಎಂದು ಬಿಎಲ್ಡಿಈ ಸಂಸ್ಥೆಯ ಎಸ್ ಎಸ್ ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಡಳಿತಾಧಿಕಾರಿ ಐಎಸ್ ಕಾಳಪ್ಪನವರ ಎಂದರು.
ವಿಜಯಪುರದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಪದವಿ ಪೂರ್ವ ಶಿಕ್ಷಣ ಇಲಾಖೆ, ಬಿಎಲ್ಡಿಈ ಸಂಸ್ಥೆಯ ಎಸ್ ಎಸ್ ಪದವಿ ಪೂರ್ವ ಕಾಲೇಜು ನೇತೃತ್ವದಲ್ಲಿ ನವೆಂಬರ್ 9 ಹಾಗೂ 10ರಂದು ಎರಡು ದಿನ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ. ಕ್ರೀಡಾಕೂಟವನ್ನು ಶಿಕ್ಷಣ ಸಚಿವ ಬಿ. ನಾಗೇಶ ಉದ್ಘಾಟನೆ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಸುನೀಲಗೌಡ ಪಾಟೀಲ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದರು.
ಅಲ್ಲದೇ, 32 ಶೈಕ್ಷಣಿಕ ಜಿಲ್ಲೆಗಳಿಂದ 32 ಬಾಲಕರ ತಂಡ, 32 ಬಾಲಕಿಯರ ತಂಡ ಭಾಗವಹಿಸಲಿದ್ದು, 832 ಕ್ರೀಡಾಪಟುಗಳು ಆಗಮಿಸಲಿದ್ದು, ಇವರಿಗೆ 80 ತರಬೇತುದಾರ ತರಬೇತಿ ನೀಡಲಿದ್ದಾರೆ. ಕ್ರೀಡಾಪಟುಗಳಿಗೆ 8 ವಸತಿ ನಿಲಯಗಳಲ್ಲಿ ಊಟ, ನೀರು ಸೇರಿದಂತೆ ಇರಲು ವ್ಯವಸ್ಥೆ ಮಾಡಲಾಗಿದೆ ಎಂದರು.