ಧಾರವಾಡ: ಕ್ರೂಸರ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ನಡೆದಿದೆ.
ಹಳಿಯಾಳ ತಾಲೂಕಿನ ನಂದಿಗಟ್ಟ ಗ್ರಾಮದಿಂದ ಹೊರಟಿದ್ದ ಕ್ರೂಸರ್ ವಾಹನ, ರಾಮನಾಳ ಕ್ರಾಸ್ ಬಳಿ ಅಪಘಾತಕ್ಕೀಡಾಗಿದೆ. ಶಿವನಗೌಡ ಪಾಟೀಲ, ಅಮೃತ ಪಾಟೀಲ ಸಾವಿಗೀಡಾಗಿದ್ದಾರೆ. ಚಾಲಕ ಮಾರುತಿ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ದೇವೆಂದ್ರ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲಘಟಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.