ವಿಜಯಪುರ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ನಡೆದಿದೆ.
ಇನ್ನು ಡಿಕ್ಕಿಯಾಗಿರುವ ಬಳಿಕ ಅಪರಿಚಿತ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಅಲ್ಲದೇ, ಅಪಘಾತದಲ್ಲಿ ಸಾವನ್ನಪ್ಪಿದವರು ಹೆಸರು ಲಭ್ಯವಾಗಿಲ್ಲ. ಇನ್ನು ಮೃತಪಟ್ಟಿರುವವರು ಕೊಲ್ಹಾರ ಪಟ್ಟಣದ ನಿವಾಸಿಗಳು ಎಂದು ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲ್ಹಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.