ವಿಜಯಪುರ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಡೆದಿದೆ. ಸಾಗರ ಬೈಚದಾಳ್ 21, ಸುದೀಪ ಗುದ್ದಿ 20 ಮೃತಪಟ್ಟಿರುವ ದುರ್ದೈವಿಗಳು. ಬೈಕ್ಗೆ ಹಿಂಬದಿಯಿಂದ ಸರ್ಕಾರಿ ಬಸ್ ಡಿಕ್ಕಿಯಾಗಿದೆ. ಇದರಿಂದ ಸ್ಥಳದಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ. ಮೃತಪಟ್ಟಿರುವ ದೇಹಗಳು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸವನಬಾಗೇವಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.