ವಿಜಯಪುರ: ಕಾರು ಹಾಗೂ ಸರ್ಕಾರಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ, ಇಬ್ಬರು ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕುಬಕಡ್ಡಿ ಕ್ರಾಸ್ ಬಳಿ ನಡೆದಿದೆ.
ಇನ್ನು ಕಲಬುರಗಿ ಮೂಲದ ಇಬ್ಬರು ಮೃತಪಟ್ಟಿದ್ದು, ಹೆಸರು ಹಾಗೂ ಮಾಹಿತಿ ತಿಳಿದು ಬಂದಿಲ್ಲ. ಅಲ್ಲದೇ, ಘಟನೆಯಲ್ಲಿ ಎರಡು ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅಲ್ಲದೇ, ಕಾರಿನಲ್ಲಿದ್ದ ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲ್ಹಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.