ವಿಜಯಪುರ: ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್ ಗೆ ಹಿಂಬದಿಯಿಂದ ಕ್ರೂಸರ್ಗೆ ಡಿಕ್ಕಿಯಾಗಿರುವ ಪರಿಣಾಮ ಸ್ಥಳದಲ್ಲಿ ಇಬ್ಬರು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಧೂಳಖೇಡ್ ಬಳಿ ನಡೆದಿದೆ.
ಬೆಳಗಾವಿ ಜಿಲ್ಲೆ ಅಥಣಿ ಮೂಲದ ಪತಿ ಪತ್ನಿ ಸಾವನ್ನಪ್ಪಿದ್ದಾರೆ. ಶಿವಪುತ್ರ ಶಿಂಧೆ (50)
ಸುಮಿತ್ರಾ ಶಿಂಧೆ (45) ಮೃತಪಟ್ಟಿರುವ ದುರ್ದೈವಿ. ಕ್ರೂಜರ್ನಲ್ಲಿದ್ದ ಇನ್ನು 9 ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.