ವಿಜಯಪುರ: ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಬಳಿ ಕೆ ಬಿ ಜೆ ಎನ್ ಎಲ್ ಕಾಲುವೆಯಲ್ಲಿ ಗುರುವಾರ ನಡೆದಿದೆ. ರಸೂಲ್ ಮಾಲದಾರ(೨೫) ಹಾಗೂ ಸಮಿವುಲ್ಲಾ ಗೊಳಸಂಗಿ(೧೦) ಮೃತ ದುರ್ದೈವಿಗಳು. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದವರು ಎಂದು ಗುರುತಿಸಲಾಗಿದೆ. ಅಲ್ಲದೇ, ಕೂಲಿ ಕಾರ್ಮಿಕರಾಗಿದ್ದು, ಮುದ್ದೇಬಿಹಾಳದ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ರು. ಕಾಲುವೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ಸಹಾಯದಿಂದ ಶವ ಹೊರಕ್ಕೆ ತೆಗೆಯಲಾಗಿದೆ.
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.