ವಿಜಯಪುರ: ಅನುಮಾನಸ್ಪದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ಸರ್ಕಲ್ನಲ್ಲಿ ಪತ್ತೆಯಾಗಿದೆ. ಅಪರಿಚಿತ ಪುರುಷನ ಶವ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಸಹಜ ಸಾವೋ ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.