ವಿಜಯಪುರ: ಹಳ್ಳದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಬಳಿ ಸಿಕ್ಕಿದೆ.
ಇನ್ನೂ ದುಷ್ಕರ್ಮಿಗಳು ಮಹಿಳೆಯನ್ನು ಹತ್ಯೆಗೈದು ಹಳ್ಳದಲ್ಲಿ ಎಸೆದು ಪರಾರಿಯಾಗಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇನ್ನು ಹಳ್ಳದಲ್ಲಿ ಶವ ಕೊಚ್ಚಿಕೊಂಡು ದಡದ ಬಳಿ ಬಂದಿದ್ದು, ಸ್ಥಳೀಯರು ಮೊಬೈಲ್ ನಲ್ಲಿ ವಿಡಿಯೋ ಸೆರೆ ಹಿಡಿದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಡಚಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.