ವಿಜಯಪುರ: ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ನಡೆದಿದೆ.
ಕಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗೋಕಾಕ ಮೂಲದ ಸಂಜು ಹಿತಾರಗೌಡರ(33) ಹಾಗೂ ನಾಗರಾಜ ಯಡವಣ್ಣವರ(34) ಮೃತ ದುರ್ದೈವಿಗಳು. ಆಶಿಫ್ ಮುಲ್ಲಾ(24) ಗಾಯಗೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಪಿಐ ಎನ್.ಎಸ್ ಜನಗೌಡ, ಪಿಎಸ್ಐ ಸೋಮೇಶ ಗೆಜ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.