ವಿಜಯಪುರ: ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ ಕಾರು ಅಪಘಾತ ಆಗಿರುವ ಘಟನೆ ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ನಡದಿದೆ. ಬೈಕ್ಗೆ ಕಾರು ಡಿಕ್ಕಿ ತಪ್ಪಿಸಲು ಹೋಗಿ ಮುಂದಿನ ಕಾರ್ಗೆ ಡಿಕ್ಕಿಯಾಗಿದೆ. ಇದರಿಂದ ಬಾಗಲಕೋಟ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ ಹಾಗೂ ಇನ್ನು ಇಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ವಿಜಯಪುರ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.