ವಿಜಯಪುರ: ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಹಣ ಹಂಚಲು ಬಂದಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯನ್ನು ಸ್ಥಳೀಯರು ರೇಡ್ ಹ್ಯಾಂಡ್ ಹಿಡಿದುಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ.
ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ ಹಣ ಹಂಚಿಕೆ ಮಾಡಿರುವ ಆರೋಪವನ್ನು ಸ್ಥಳೀಯರು ಮಾಡಿದ್ದಾರೆ. ಅಲ್ಲದೇ, ಸ್ಥಳೀಯರ ಕೈಗೆ ವಿದ್ಯಾರಾಣಿ ತುಂಗಳ ಸಿಕ್ಕಿ ಬಿದ್ದಿದ್ದು, ಸ್ಥಳೀಯರು ವಿಡಿಯೋ ಮಾಡುವಾಗ ದರ್ಪದಿಂದ ಮೊಬೈಲ್ ಕಸಿದುಕೊಂಡಿದ್ದಾರೆ. ಇದೀಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದೆ.