ವಿಜಯಪುರ: ಪೋಕ್ಸೊ ಕಾಯ್ದೆಗಳನ್ನು ಪತ್ರಕರ್ತರು ಅರ್ಥ ಮಾಡಿಕೊಂಡು ವರದಿ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಣ್ಣ ಹೊಸಮನಿ ಹೇಳಿದರು.
ವಿಜಯಪುರ ನಗರದ ಪತ್ರಿಕಾ ಭವನದಲ್ಲಿ ನಡೆದ ಮಾಧ್ಯಮ ಪ್ರತಿನಿಧಿಗಳಿಗೆ ಪೋಕ್ಸೊ ಮತ್ತು ಜೆಜೆ ಆ್ಯಕ್ಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ನಂತರ ಮಾತನಾಡಿದರು. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕೆಲಸಗಳನ್ನು ಪತ್ರಕರ್ತರು ಜವಾಬ್ದಾರಿ ಆಗಿದೆ. ಸಮಾಜದಲ್ಲಿ ನಡೆಯುವ ಪ್ರತಿಯೊಂದು ಘಟನೆಗಳನ್ನು ಪತ್ರಕರ್ತರು ನೀಡುತ್ತಿದ್ದಾರೆ. ಅದೇ ತರಹ ಪೋಕ್ಸೊ ಹಾಗೂ ಜೆಜೆ ಆ್ಯಕ್ಟ್ನ ಕಾನೂನುಗಳನ್ನು ಅರಿತುಕೊಳ್ಳಬೇಕು ಎಂದರು. ಈ ವೇಳೆಯಲ್ಲಿ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.