ವಿಜಯಪುರ: ಬಿ ಎಲ್ ಡಿ ಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಮಹಿಳಾ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಬಿ. ಕಾಂ. ಮೊದಲ ವರ್ಷದ ವಿದ್ಯಾರ್ಥಿನಿ ಅನ್ನಪೂರ್ಣ ಜಿ. ಭೋಸಲೆ 19 ವರ್ಷದೊಳಗಿನ ಕರ್ನಾಟಕ ಮಹಿಳಾ ಟಿ-20 ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ 15 ಜನ ಆಟಗಾರರ ಪಟ್ಟಿಯನ್ನು ಇಂದು ಪ್ರಕಟಿಸಿದ್ದು, ಅನ್ನಪೂರ್ಣ ಜಿ. ಭೋಸಲೆ ವಿಕೆಟ್ ಕೀಪರ್ ಬ್ಯಾಟ್ಸಮನ್ ಆಗಿ ಆಯ್ಕೆಯಾಗಿದ್ದಾರೆ.
ಹೈದರಾಬಾದಿನಲ್ಲಿ ಅಕ್ಟೋಬರ್ 1 ರಿಂದ ಅಕ್ಟೋಬರ್. 8ರ ವರೆಗೆ ಮಹಿಳೆಯರ ಟಿ-20 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.