ವಿಜಯಪುರ: ಲಂಚಕ್ಕೆ ಬೇಡಿಕೆ ಇಟ್ಟಿದ ದ್ವೀತಿಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಮುಳವಾಡ ಗ್ರಾಮ ಪಂಚಾಯತಿಯ ಆವರಣದಲ್ಲಿ ನಡೆದಿದೆ. ಮುಳವಾಡ ಗ್ರಾಮ ಪಂಚಾಯತಿಯಲ್ಲಿ ದ್ವೀತಿಯ ದರ್ಜೆಯ ಸಹಾಯಕ ಮಲ್ಲಪ್ಪ ಹೊಸಕೇರಿ ಲೋಕಾಯುಕ್ತ ಬಲೆಗೆ ಬಿದ್ದವರು. ಇನ್ನು 10 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಲ್ಲಪ್ಪ. ಪಿರ್ಯಾದಿದಾರರಿಂದ ಲಂಚ ಪಡೆಯುವಾಗ ಲೋಕಾಯುಕ್ತ ಇನ್ಸ್‌ಪೆಕ್ಟರ್ ಆನಂದ ಟಕ್ಕನ್ನವರ್ ಹಾಗೂ ಸಿಬ್ಬಂದಿಗಳಿಂದ ದಾಳಿ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ಲೋಕಾಯುಕ್ತದಲ್ಲಿ ಕೇಸ್ ದಾಖಲಾಗಿದೆ.