ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪೂರ ಹೋಬಳಿಯ ಉಪ್ಪಲದಿನ್ನಿ ಗ್ರಾಮದಲ್ಲಿ ದಿನಾಂಕ:19-03-2022 (ಶನಿವಾರ) ರಂದು “ಜಿಲ್ಲಾಧಿಕಾರಿಗಳವರ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮದಡಿಯಲ್ಲಿ ಜಿಲ್ಲಾಧಿಕಾರಿಗಳು ಉಪ್ಪಲದಿನ್ನಿ ಗ್ರಾಮಕ್ಕೆ ಬೇಟಿ ನೀಡಿ ಗ್ರಾಮಸ್ಥರ ಕುಂದು ಕೊರತೆ ಕುರಿತು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಶ್ರೀ ಸಂಗಮೇಶ್ವರ ಕಲ್ಯಾಣ ಮಂಟಪ ದಲ್ಲಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಆ ದಿನ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದ್ದು, ಕಾರಣಸಾರ್ವಜನಿಕರು ಮತ್ತು ರೈತಬಾಂಧವರು ಬೆಳಿಗ್ಗೆ 10-00ಗಂಟೆಯಿಂದ ಸಾಯಂಕಾಲ 5-00 ಗಂಟೆಯವರೆಗೆ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಬಬಲೇಶ್ವರ ತಹಶೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.