ವಿಜಯಪುರ: ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ನಗರದ ಇಟ್ಟಗಿ ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ಸಂತೋಷ ಎಂಬುವರ ಕಾರು ಸಂಪೂರ್ಣ ಜಖಂಗೊಂಡಿದೆ. ಆದ್ರೇ, ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಅಲ್ಲದೇ, ಲಾರಿ ಚಾಲಕನ ನಿರ್ಲಕ್ಷ್ಯ ಹಾಗೂ ರಾಂಗ್ ಸೈಡ್ ಬಂದಿರುವ ಹಿನ್ನಲೆ ಈ ಅಪಘಾತ ಆಗಿದೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.